ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ಸಂಪರ್ಕ ಹೊಂದಿದ್ದರೆಂಬ ಶಂಕೆಯಲ್ಲಿ ಒಂಬತ್ತು ಮಂದಿಯನ್ನು ದೆಹಲಿ ಪೊಲೀಸರ ವಿಶೇಷ ದಳ ಬಂಧಿಸಿದೆ. ಆರೋಪಿಗಳು ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತರಿಂದ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪರಮಾಣು ಸ್ಥಾವರಗಳು, ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು ಹಾಗೂ ವಿದ್ಯುತ್ ಘಟಕಗಳ ಮೇಲೆ ದಾಳಿ ನಡೆಸುವ ಯೋಜನೆ ಇದ್ದುದಾಗಿ ತನಿಖೆಯಲ್ಲಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಗಡಿಯಾಚೆಗಿನ ಸಂಪರ್ಕಗಳು, ಹಣಕಾಸಿನ ಮೂಲಗಳು ಹಾಗೂ ಉಗ್ರ ಜಾಲದ ಹಿನ್ನಲೆ ಕುರಿತು ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ದೆಹಲಿ ಪೊಲೀಸರು ಮಧ್ಯಾಹ್ನ ಪತ್ರಿಕಾಗೋಷ್ಠಿ ನಡೆಸಿ ಹೆಚ್ಚಿನ ಮಾಹಿತಿ ನೀಡಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

