Breaking News

ಒಂದೇ ಕುಟುಂಬದ 6 ಜನರ ಕಗ್ಗೊಲೆ ಪ್ರಕರಣದಲ್ಲಿ 10 ಮಂದಿ ಬಂಧನ

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರದಲ್ಲಿ ಜಮೀನು ವಿವಾದದ ಹಿನ್ನೆಲೆ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಆರು ಮಂದಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಹತ್ತು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಉತ್ತರ ವಲಯ ಐಜಿಪಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಸುಮಾರು 25 ಎಕರೆ ಜಮೀನು ವಿವಾದದಿಂದ ಉಂಟಾದ ದ್ವೇಷದ ಹಿನ್ನೆಲೆಯಲ್ಲಿ ಆರೋಪಿಗಳು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ ಗುಂಡು ಹಾರಿಸಿ ಬಳಿಕ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ಕೂಲಿ ಕಾರ್ಮಿಕನಾಗಿದ್ದ ಶಬ್ಬೀರ್ ಕೂಡ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರಕರಣದ ತನಿಖೆಯನ್ನು ಚಡಚಣ ಪೊಲೀಸರು ಮುಂದುವರಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *