Breaking News

ಮನೆಯಲ್ಲಿದ್ದ 7 ಲಕ್ಷ ರೂ. ನಗದು ಕಳವು: ಸಿಕ್ಕಿಬಿದ್ದ ಆರೋಪಿಗಳಿಂದ 5 ಲಕ್ಷ ರೂ. ಜಪ್ತಿ

ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಯೊಂದರಿಂದ 7 ಲಕ್ಷ ರೂ. ನಗದು ಕಳವು ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 5.13 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಮೇ 26ರಂದು ಕಾಶಿಪುರದ ಲಕ್ಕಪ್ಪ ಲೇಔಟ್‌ನ ಮನೆಯಲ್ಲಿ ಕಳ್ಳತನ ನಡೆದಿದ್ದು, ದೂರು ದಾಖಲಾದ ಬಳಿಕ ವಿಶೇಷ ಪೊಲೀಸ್ ತಂಡ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿತ್ತು. ತನಿಖೆಯಲ್ಲಿ ಶಿವಮೊಗ್ಗದ ಟಿಪ್ಪುನಗರ ನಿವಾಸಿಗಳಾದ ಮೊಹಮ್ಮದ್ ಸಲೀಂ (27) ಹಾಗೂ ಮೊಹಮ್ಮದ್ ರಜಾಕ್ (26) ಬಂಧಿತರಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ: ಮಂಗಳೂರಿನ ಧರ್ಮಗುರು ವಿರುದ್ಧ ಮತ್ತೊಂದು ಕೇಸ್

ಮಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚರ್ಚ್‌ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) …

Leave a Reply

Your email address will not be published. Required fields are marked *