Breaking News

ಬೆಳಗಾವಿ: ಕಂಟ್ರಿ ಪಿಸ್ತೂಲ್‌ ತಯಾರಿಸುತ್ತಿದ್ದ 13 ಬಂದಿ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಾಟಗಾಳಿ ಗ್ರಾಮದಲ್ಲಿ ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿ 13 ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 9 ಕಂಟ್ರಿ ಪಿಸ್ತೂಲ್‌ಗಳು, ಜೀವಂತ ಗುಂಡುಗಳು, ಮದ್ದು ಹಾಗೂ ವಿವಿಧ ಶಸ್ತ್ರಾಸ್ತ್ರ ತಯಾರಿಕಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಮುಖ ಆರೋಪಿ ಮಾರುತಿ ಶ್ರೀಕಾಂತ್ ಸುತಾರ 2024ರಿಂದ ತನ್ನ ಮನೆಯಲ್ಲಿ ಪಿಸ್ತೂಲ್ ತಯಾರಿಸಿ ಮಾರಾಟ ಮಾಡುತ್ತಿದ್ದನೆಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಜೊತೆಗೆ ಮದ್ದು-ಗುಂಡು ಪೂರೈಕೆದಾರರು, ಖರೀದಿದಾರರು ಹಾಗೂ ಶಸ್ತ್ರಾಸ್ತ್ರಗಳ ಬಿಡಿಭಾಗಗಳನ್ನು ಮಾರಾಟ ಮಾಡುತ್ತಿದ್ದವರನ್ನೂ ಬಂಧಿಸಲಾಗಿದೆ. ಪ್ರಕರಣದಲ್ಲಿ ಒಟ್ಟು 48 ಜೀವಂತ ಕಾಡತೂಸುಗಳು, 34 ಮದ್ದು ಪ್ಯಾಕೆಟ್‌ಗಳು, 449 ಸೀಸದ ಗೋಲಿಗಳು, 420 ಕೇಪ್‌ಗಳು ಹಾಗೂ ಹಲವು ಗನ್ ಬಿಡಿಭಾಗಗಳನ್ನು ವಶಪಡಿಸಿಕೊಂಡಿದ್ದು, ಎಲ್ಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *