Breaking News

ಮಾಲ್‌ ವ್ಯವಸ್ಥಾಪಕನ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ಕ್ಯಾಷಿಯರ್

ವಿಜಯಪುರ ನಗರದ ರಾಂಪೂರೆ ಕಾಲೊನಿಯಲ್ಲಿ ಯುವ ಕ್ಯಾಷಿಯರ್‌ ಲಕ್ಷ್ಮೀಕಾಂತ್‌ ಬಸವರಾಜ ಮಠಪತಿ (22) ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಖಾಸಗಿ ಮಾಲ್‌ನ ವ್ಯವಸ್ಥಾಪಕ ಕಿರುಕುಳ ನೀಡುತ್ತಿದ್ದನೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹಣದ ದುರುಪಯೋಗದ ಆರೋಪ ಮಾಡಿ ವ್ಯವಸ್ಥಾಪಕ ಕಿಶೋರ್‌ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಮೃತನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಯುವಕ ತನ್ನ ಕುಟುಂಬದವರೊಂದಿಗೆ ಮಾತನಾಡಿದ್ದು, ಸಹೋದರನಿಗೆ ಧ್ವನಿ ಸಂದೇಶವನ್ನೂ ಕಳುಹಿಸಿದ್ದಾನೆ ಎನ್ನಲಾಗಿದೆ. ಪ್ರಕರಣ ಗಾಂಧಿಗಂಜ್‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಘಟನೆಯ ಬಳಿಕ ಕುಟುಂಬಸ್ಥರು ಹಾಗೂ ಸ್ನೇಹಿತರು ಮಾಲ್‌ ಎದುರು ಪ್ರತಿಭಟನೆ ನಡೆಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *