Breaking News

2 ಕೆಜಿ ಗಾಂಜಾ ವಶ

ಕಡೂರಿನ ರೈಲಿನಲ್ಲಿ ಎರಡು ಕೆಜಿ ಗಾಂಜಾ ವಶಪಡಿಸಿಕೊಂಡಿದ್ದು, ಮತ್ತೊಂದಿ ಪ್ರಕರಣದಲ್ಲಿ ಗಾಂಜಾ ವ್ಯಸನಿಯನ್ನು ಬಂಧಿಸಲಾಗಿದೆ. ಯಶವಂತಪುರಕ್ಕೆ ಸಂಚರಿಸುತ್ತಿದ್ದ ರೈಲಿನಲ್ಲಿ ಸಾಗಿಸುತ್ತಿದ್ದ 2 ಕೆಜಿ ಗಾಂಜಾವನ್ನು ಶನಿವಾರ ಕಡೂರು ರೈಲ್ವೆ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ಕಡೂರು ಅಬಕಾರಿ ಇಲಾಖೆ ಮತ್ತು ರೈಲ್ವೆ ಪೊಲೀಸರು ಜಂಟಿಯಾಗಿ ಬೀರೂರು ರೈಲ್ವೆ ನಿಲ್ದಾಣದಿಂದ ರೈಲಿನಲ್ಲಿ ಪರಿಶೀಲನೆ ನಡೆಸುತ್ತಿದ್ದರು. 2 ಕೆಜಿಯಷ್ಟು ಗಾಂಜಾ ಚೀಲವನ್ನು ಪತ್ತೆ ಮಾಡಿದ್ದರಿಂದ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಕಾರ್ಯಾಚರಣೆಯಲ್ಲಿ ಕಡೂರು ಅಬಕಾರಿ ನಿರೀಕ್ಷಕ ಎಲ್.ಸಿ.ಸಂದೀಪ್, ಆರ್‌ಪಿಎಫ್ ರೈಲ್ವೆ ಪೊಲೀಸ್ ಆನಂದ್, ಅಬಕಾರಿ ಮುಖ್ಯಪೇದೆ ಮಂಜುಳಾ, ಕುಮಾರ್, ಕಿರಣ್ ಇದ್ದರು. ಇನ್ನೊಂದು ಪ್ರಕರಣದಲ್ಲಿ ಕಡೂರಿನ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಬಳಿ ಗಾಂಜಾ ಸೇವಿಸಿ ಅಮಲಿನಲ್ಲಿ ಅಲೆದಾಡುತ್ತಿದ್ದ ಆರೋಪಿಯನ್ನು ಅಬಕಾರಿ ನಿರೀಕ್ಷಕ ಎಲ್.ಸಿ.ಸಂದೀಪ್ ಬಂಧಿಸಿದ್ದಾರೆ. ಕಡೂರಿನ ಧನುಷ್ ಆರೋಪಿ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *