ಬೆಂಗಳೂರು: ರಾಜಾಜಿನಗರದ ಎಚ್‌ಡಿಎಫ್‌ಸಿ ಬ್ಯಾಂಕ್ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ 22 ವರ್ಷದ ಭದ್ರತಾ ಸಿಬ್ಬಂದಿ ಪಿಂಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿಹಾರ ಮೂಲದ ಪಿಂಟು ಜಿಐಎಸ್ ಸೆಕ್ಯೂರಿಟಿ ಏಜೆನ್ಸಿ ಮೂಲಕ ಕೆಲಸ ಮಾಡುತ್ತಿದ್ದು, ಬ್ಯಾಂಕ್ ಕಟ್ಟಡದ ರೈಲಿಂಗ್‌ಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

