Breaking News

ಡಿಜಿಟಲ್ ಅರೆಸ್ಟ್: ₹ 21.50 ಲಕ್ಷ ಕಿತ್ತ ನಕಲಿ ಸಿಬಿಐ ಅಧಿಕಾರಿ ವಿರುದ್ಧ ದೂರು

ಹಾವೇರಿ ಜಿಲ್ಲೆಯ ವ್ಯಕ್ತಿಯೊಬ್ಬರು ಡಿಜಿಟಲ್ ಅರೆಸ್ಟ್‌ ವಂಚನೆಗೆ ಒಳಗಾಗಿ ₹21.50 ಲಕ್ಷ ಕಳೆದುಕೊಂಡಿದ್ದಾರೆ. ಸಿಬಿಐ ಹಾಗೂ ಇಡಿ ಅಧಿಕಾರಿಗಳೆಂದು ನಕಲಿ ಪರಿಚಯಿಸಿಕೊಂಡ ವಂಚಕರು, ಪಹಲ್ಗಾಮ್‌ ದಾಳಿಯ ಉಗ್ರನಿಗೆ ಆಧಾರ್ ಕಾರ್ಡ್‌ ನೀಡಿ ಹಣ ವರ್ಗಾವಣೆಗೆ ಸಹಾಯ ಮಾಡಿದ್ದೀರಿ ಎಂದು ಬೆದರಿಸಿದ್ದಾರೆ.
ವಂಚಕರು ವಿಡಿಯೊ ಕರೆ ಮೂಲಕ ನಕಲಿ ದಾಖಲೆಗಳನ್ನು ತೋರಿಸಿ, ನಿಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ನಂಬಿಸಿದ್ದಾರೆ. ಹಣ ನೀಡಿದರೆ ಪ್ರಕರಣದಿಂದ ಹೆಸರು ಕೈಬಿಡುತ್ತೇವೆ ಎಂದು ಹೇಳಿ, ವಿವಿಧ ಬ್ಯಾಂಕ್‌ ಖಾತೆಗಳಿಗೆ ಹಂತ ಹಂತವಾಗಿ ₹21.50 ಲಕ್ಷ ಜಮೆ ಮಾಡಿಸಿಕೊಂಡಿದ್ದಾರೆ. ಬಳಿಕ ಮತ್ತಷ್ಟು ಹಣ ಕೇಳಿದಾಗ ಅನುಮಾನಗೊಂಡ ಸಂತ್ರಸ್ತರು 1930 ಸೈಬರ್ ಸಹಾಯವಾಣಿಗೆ ದೂರು ನೀಡಿದ್ದಾರೆ. ಈ ಸಂಬಂಧ ಹಾವೇರಿ ಜಿಲ್ಲಾ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಂತಹ ಡಿಜಿಟಲ್ ಅರೆಸ್ಟ್‌ ವಂಚನೆಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *