Breaking News

ಬೆಂಗಳೂರಿಗೆ ಬಂದ್ರೆ ರೇಪ್ ಗ್ಯಾರೆಂಟಿ – ಯುವತಿಗೆ ಬೆದರಿಕೆ ಹಾಕಿದ ಆರ್ಸಿಬಿ ಫ್ಯಾನ್ ಅರೆಸ್ಟ್!

ಐಪಿಎಲ್‌ ಫೈನಲ್‌ ಪಂದ್ಯಕ್ಕೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಬೆಂಬಲಿಸಿದ್ದ ಯುವತಿಯೊಬ್ಬಳ ಹಳೆಯ ವಿಡಿಯೊವನ್ನು ಹಂಚಿಕೊಂಡ ಆರ್‌ಸಿಬಿ ಅಭಿಮಾನಿಯೊಬ್ಬ ಅಸಭ್ಯವಾಗಿ ಮಾತನಾಡಿ ಅತ್ಯಾಚಾರದ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಹೈದರಾಬಾದ್‌ ತಂಡ ಎಲಿಮಿನೇಟರ್‌ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದ ಬಳಿಕ, ಯುವತಿಯ ಹಳೆಯ ವಿಡಿಯೊವನ್ನು ಕೆಲವರು ಟ್ರೋಲ್‌ ಮಾಡಲು ಆರಂಭಿಸಿದ್ದರು. ಈ ವೇಳೆ ಸಂಜು ಎಂಬಾತ ವಿಡಿಯೊ ಹಂಚಿಕೊಂಡು ಅವಹೇಳನಕಾರಿ ಹಾಗೂ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ನೆಟ್ಟಿಗರು ಸೈಬರ್‌ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು, ಇಂತಹ ಅಸಭ್ಯ ಮತ್ತು ಬೆದರಿಕೆ ಹಾಕುವ ವರ್ತನೆಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *