ಬೆಂಗಳೂರು: ಮಟನ್ ಊಟ ಆರ್ಡರ್ ಮಾಡಿದ ಗ್ರಾಹಕರಿಗೆ ದನದ ಮಾಂಸ ನೀಡಿದ ಆರೋಪದಡಿ ಆವಲಹಳ್ಳಿ ಠಾಣೆ ಪೊಲೀಸರು ಬೊಮ್ಮೇನಹಳ್ಳಿಯ ಕಾಯಲೋರಂ ರೆಸ್ಟೋರೆಂಟ್‌ನ ಮಾಲೀಕರಾದ ಜೀಜು ಹಾಗೂ ಶಿಬು ಅವರನ್ನು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ರೆಸ್ಟೋರೆಂಟ್‌ಗೆ ಊಟಕ್ಕೆ ತೆರಳಿದ್ದ ಯುವಕರ ಗುಂಪಿಗೆ ನೀಡಿದ ಮಾಂಸದ ಬಗ್ಗೆ ಅನುಮಾನ ಮೂಡಿದ ಹಿನ್ನೆಲೆಯಲ್ಲಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದಾಗ, ಮಟನ್ ಎಂದು ನೀಡಿದ್ದದ್ದು ದನದ ಮಾಂಸ ಎಂಬುದು ದೃಢಪಟ್ಟಿದೆ. ತನಿಖೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ರೆಸ್ಟೋರೆಂಟ್‌ಗೆ ಬೀಗ ಜಡಿಯಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಆವಲಹಳ್ಳಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಬೆಳಕಿಗೆ ಬಂದ ಬಳಿಕ ರೆಸ್ಟೋರೆಂಟ್‌ನಲ್ಲಿ ಊಟ ಮಾಡಿದ್ದ ಹಲವು ಗ್ರಾಹಕರು ಆತಂಕ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

