ರಾಮನಗರ: ಪತ್ನಿಯ ನಡತೆ ಬಗ್ಗೆ ಅನುಮಾನಗೊಂಡಿದ್ದ ಪತಿಯೊಬ್ಬ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ರಾಮನಗರ ತಾಲ್ಲೂಕಿನ ಕೈಲಾಂಚ ಹೋಬಳಿಯ ದಾಸರಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ನಾಗಮ (42) ಕೊಲೆಯಾದ ಗೃಹಿಣಿಯಾಗಿದ್ದು, ಪತಿ ಕಣಿಮಾದಯ್ಯನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಇತ್ತೀಚೆಗೆ ನಾಗಮನ ನಡತೆ ಬಗ್ಗೆ ಅನುಮಾನಗೊಂಡಿದ್ದ ಕಣಿಮಾದಯ್ಯ ಆಗಾಗ ಜಗಳವಾಡುತ್ತಿದ್ದ ಎನ್ನಲಾಗಿದೆ. ಭಾನುವಾರ ಬೆಳಗ್ಗೆ ಇದೇ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಕೋಪಗೊಂಡ ಕಣಿಮಾದಯ್ಯ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದು, ಘಟನೆಯ ನಿಖರ ಕಾರಣ ಕುರಿತು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

