Breaking News

ಗಾಂಜಾ ಪ್ರಕರಣ: ಸಜೆ, ದಂಡ

ಕಾಸರಗೋಡು: ಗಾಂಜಾ ಪ್ರಕರಣದ ಆರೋಪಿ ಮಂಗಲ್ಪಾಡಿಯ ಮೊಹಮ್ಮದ್‌ ಬಾದಿಷಾ ಕೆ.ಎಸ್‌(42) ಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ (ದ್ವಿತೀಯ) ಒಂದು ವರ್ಷ ಕಠಿನ ಸಜೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ಪಾವತಿಸದಿದ್ದಲ್ಲಿ ಎರಡು ತಿಂಗಳು ಹೆಚ್ಚುವರಿಯಾಗಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ. 2020 ಜುಲೈ 5 ರಂದು ಸಂಜೆ ನಿರ್ಮಾಣ ಹಂತದಲ್ಲಿರುವ ಮನೆಯಿಂದ 4.2 ಕಿಲೋ ಗಾಂಜಾವನ್ನು ಕುಂಬಳೆ ಪೊಲೀಸರು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದರು.

Share News

About BigTv News

Check Also

ತೋಟದಲ್ಲಿ ಗಾಂಜಾ ಗಿಡ ಬೆಳೆದು ಸಿಕ್ಕಿಬಿದ್ದ ಪೊಲೀಸಪ್ಪನ ಪುತ್ರ: ಅತ್ತ ತಂದೆಯಿಂದ ಜಾಗೃತಿ, ಇತ್ತ ಮಗನಿಂದ ಕುಕೃತ್ಯ!

ತುಮಕೂರು: ಡ್ರಗ್ಸ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ, ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ಗಿಡ …

Leave a Reply

Your email address will not be published. Required fields are marked *