ಚಿಕ್ಕಬಳ್ಳಾಪುರ ಜಿಲ್ಲೆಯ ಕಂದವಾರ ಬಾಗಿಲು ಬಡಾವಣೆಯಲ್ಲಿ ವಿವಾಹಿತೆ ಪುಷ್ಪಲತಾ ಅವರ ನಿಗೂಢ ಹತ್ಯೆ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮನೆಯಲ್ಲಿ ಮಲಗಿದ್ದ ವೇಳೆ ದುಷ್ಕರ್ಮಿಗಳು ಹತ್ಯೆ ಮಾಡಿ, ಕೊರಳಿನಲ್ಲಿದ್ದ ಮಾಂಗಲ್ಯ ಸರ ದೋಚಿ ಪರಾರಿಯಾಗಿದ್ದಾರೆ. ಘಟನೆಯ ವೇಳೆ ಮನೆಯಲ್ಲಿದ್ದ ನಾದಿನಿಗೆ ರಾಸಾಯನಿಕ ಸ್ಪ್ರೇ ಮಾಡಿ ಅಚೇತನಗೊಳಿಸಲು ಯತ್ನಿಸಿರುವ ಆರೋಪವೂ ಕೇಳಿಬಂದಿದೆ. ಮೃತೆಯ ಪೋಷಕರು ಇದೊಂದು ಸಾಮಾನ್ಯ ದರೋಡೆ ಪ್ರಕರಣವಲ್ಲ, ಗಂಡನ ಮನೆಯವರೇ ಸುಪಾರಿ ನೀಡಿ ಕೊಲೆ ಮಾಡಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಆದರೆ ಆರೋಪಗಳನ್ನು ಅತ್ತೆ ವಿಜಯಲಕ್ಷ್ಮಿ ತಳ್ಳಿಹಾಕಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು, ಶ್ವಾನದಳ ಹಾಗೂ ಎಫ್‌ಎಸ್‌ಎಲ್ ಅಧಿಕಾರಿಗಳು ಸಾಕ್ಷ್ಯ ಸಂಗ್ರಹಿಸಿದ್ದು, ದರೋಡೆಗಾಗಿ ನಡೆದ ಹತ್ಯೆಯೋ ಅಥವಾ ಕೌಟುಂಬಿಕ ಕಲಹದ ಹಿನ್ನೆಲೆಯ ಕೃತ್ಯವೋ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

