ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಜಾನುವಾರುಗಳನ್ನು ಅಕ್ರಮವಾಗಿ ತುಂಬಿಸಿಕೊಂಡು ಬರುತ್ತಿದ್ದ ಪಿಕಪ್ ಟೆಂಪೋ ಸಹಿತ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ರವಿವಾರ ಬಂಧಿಸಿದ್ದಾರೆ. ಕಾರ್ಕಳದ ಜಾಕ್ವೆಲಿನ್ ಮತ್ತು ಜಾಕ್ಸನ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿದ್ದಾರೆ. ಅವರು ಪಿಕಪ್ ವಾಹನದಲ್ಲಿ ಅನಧಿಕೃತವಾಗಿ ಎರಡು ಕೋಣಗಳು ಮತ್ತು ಒಂದು ಕರುವನ್ನು ತುಂಬಿಸಿಕೊಂಡು ಬರುತ್ತಿರುವ ಬಗ್ಗೆ ಮೂಡುಬಿದಿರೆ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಆಲಂಗಾರು ಅಂಡರ್ ವಾಸ್ ಬಳಿ ವಾಹನವನ್ನು ನಿಲ್ಲಿಸಿ ತನಿಖೆ ನಡೆಸಿದಾಗ ಜಾನುವಾರು ಪತ್ತೆಯಾಗಿದ್ದು, ಯಾವುದೇ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಸಾಗಿಸುತ್ತಿರುವುದರಿಂದ ಜಾನುವಾರುಗಳನ್ನು ಮತ್ತು ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ರಾಜೇಂದ್ರ ಅವರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

