ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರೊಂದರ ಇಂಜಿನ್‌ನಲ್ಲಿ ದಿಢೀರನೆ ತಾಂತ್ರಿಕ ದೋಷ ಕಾಣಿಸಿಕೊಂಡು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಹೊತ್ತಿ ಉರಿದು ಸಂಪೂರ್ಣ ಭಸ್ಮವಾಗಿರುವ ಘಟನೆ ಬೆಂಗಳೂರಿನ ನೆಲಮಂಗಲ – ಕುಣಿಗಲ್ ಮಾರ್ಗದ ಹೆದ್ದಾರಿಯ ಲಕ್ಕೇನಹಳ್ಳಿ ಬಳಿ ನಡೆದಿದೆ . ಚಾಲಕನ ಸಮಯಪ್ರಜ್ಞೆಯಿಂದಾಗಿ ಪ್ರಾಣಾಪಾಯ ತಪ್ಪಿದೆ.ಕಾರು ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಕಾರು ಲಕ್ಕೇನಹಳ್ಳಿ ಸಮೀಪ ಬರುತ್ತಿದ್ದಂತೆ ಇಂಜಿನ್ ಭಾಗದಿಂದ ದಟ್ಟವಾದ ಹೊಗೆ ಮತ್ತು ಕಿಡಿಗಳು ಹೊರಬರಲು ಆರಂಭಿಸಿವೆ. ಇದನ್ನು ತಕ್ಷಣವೇ ಗಮನಿಸಿದ ಚಾಲಕ, ತಡಮಾಡದೆ ಹೆದ್ದಾರಿ ಪಕ್ಕದಲ್ಲೇ ಕಾರನ್ನು ನಿಲ್ಲಿಸಿ ತಕ್ಷಣವೇ ಕೆಳಗೆ ಜಿಗಿದಿದ್ದಾರೆ. ಚಾಲಕ ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಾರಿಗೆ ವ್ಯಾಪಿಸಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ವಾಹನ ಅಗ್ನಿ ಕೆನ್ನಾಲಿಕೆಗೆ ತುತ್ತಾಗಿದೆ. ಇನ್ನು, ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

