ಕುಷ್ಟಗಿ: ತಾಲೂಕಿನ ಕಡೆಕೊಪ್ಪ ಬ್ರಿಡ್ಜ್ ಸಮೀಪದ ಪಾನ್‌ಬೀಡಾ ಅಂಗಡಿಯಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪದಡಿ ದಂಪತಿಯನ್ನು ಕುಷ್ಟಗಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉತ್ತರ ಪ್ರದೇಶ ಮೂಲದ ದಿಲ್ವಾಘಸಿಂಗ್ ಮೇಹರ್ ಸಿಂಗ್ (55) ಹಾಗೂ ಅವರ ಪತ್ನಿ ರವೀಂದ್ರಕೌರ್ (51) ಎಂದು ಗುರುತಿಸಲಾಗಿದೆ.ಇವರು ಪ್ರಸ್ತುತ ಕಡೆಕೊಪ್ಪ ಕ್ರಾಸ್ ಸಮೀಪ ವಾಸವಾಗಿದ್ದರು. ಗಾಂಜಾ ಮಾರಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ರಾಮ್ ಎಲ್. ಅರಸಿದ್ದಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹೇಮಂತಕುಮಾರ ಆರ್., ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡ ಹಾಗೂ ಸಿಪಿಐ ವಿಶ್ವನಾಥ ಹಿರೇಗೌಡರ ಮಾರ್ಗದರ್ಶನದಲ್ಲಿ ಪಿಎಸ್‌ಐ ಹನಮಂತಪ್ಪ ತಳವಾರ ನೇತೃತ್ವದ ವಿಶೇಷ ತಂಡ ದಾಳಿ ನಡೆಸಿತು. ದಾಳಿಯ ವೇಳೆ ಆರೋಪಿಗಳಿಂದ ಸುಮಾರು 75 ಸಾವಿರ ರೂ. ಮೌಲ್ಯದ 1 ಕೆ.ಜಿ. 745 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಲಕ್ಕೆ ಒಪ್ಪಿಸುವ ಪ್ರಕ್ರಿಯೆ ಸೇರಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ಭೇದಿಸಿ ಆರೋಪಿಗಳನ್ನು ಬಂಧಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

