Breaking News

ಅನೈತಿಕ ಸಂಬಂಧ ಶಂಕೆ: ಪತ್ನಿಯನ್ನು ಕೊಂದು ಪೊಲೀಸ್ ಠಾಣೆಯಲ್ಲಿ ಶರಣಾದ ಗಂಡ

ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮಚ್ಚಿನಿಂದ ಕೊಲೆ ಮಾಡಿದ ಘಟನೆ ರಾಮನಗರ ತಾಲ್ಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ನಾಗಮ್ಮ (42) ಮೃತಪಟ್ಟವರು. ಆರೋಪಿ ಕಣಿ ಮಾದಯ್ಯ (52) ಕೃತ್ಯದ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ದಂಪತಿ ನಡುವೆ ಈ ವಿಚಾರವಾಗಿ ಆಗಾಗ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಭಾನುವಾರ ಬೆಳಿಗ್ಗೆ ಮಾತಿನ ಚಕಮಕಿ ನಡೆದ ವೇಳೆ ಕೋಪಗೊಂಡ ಮಾದಯ್ಯ, ಮನೆಯಲ್ಲಿದ್ದ ಮಚ್ಚಿನಿಂದ ನಾಗಮ್ಮ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೃತ್ಯದ ಬಳಿಕ ಆರೋಪಿ ನೇರವಾಗಿ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *