ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಸಂಕದಗುಂಡಿ ಹೊಳೆಯಲ್ಲಿ ಸ್ನಾನಕ್ಕೆ ಇಳಿದಿದ್ದ ಹಾವೇರಿ ಮೂಲದ 16 ವರ್ಷದ ವಿದ್ಯಾರ್ಥಿ ಆಯುಷ್ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಆಯುಷ್ ಕುಟುಂಬ ಸದಸ್ಯರೊಂದಿಗೆ ಮುರುಡೇಶ್ವರ ಹಾಗೂ ಕನ್ಯಾಕುಮಾರಿ ಪ್ರವಾಸಕ್ಕೆ ಬಂದಿದ್ದನು. ಮುರುಡೇಶ್ವರ ಪ್ರವಾಸ ಮುಗಿಸಿ ಶಿರೂರು ಸಂಕದಗುಂಡಿ ಹೊಳೆಯ ಬಳಿ ವಿಶ್ರಾಂತಿಗಾಗಿ ತಂಗಿದ್ದ ವೇಳೆ ಕುಟುಂಬದವರು ಊಟದ ಸಿದ್ಧತೆಯಲ್ಲಿ ನಿರತರಾಗಿದ್ದರು. ಈ ವೇಳೆ ಆಯುಷ್ ಮತ್ತೊಬ್ಬ ಬಾಲಕನೊಂದಿಗೆ ಹೊಳೆಗೆ ಸ್ನಾನಕ್ಕೆ ತೆರಳಿದ್ದಾನೆ. ಈಜಲು ಹೋಗಿದ್ದಾಗ ಆಳವಾದ ನೀರಿಗೆ ಸಿಲುಕಿ ಮುಳುಗಿದ್ದಾನೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಸುಮಾರು ಒಂದು ಗಂಟೆಯ ಬಳಿಕ ಮೃತದೇಹವನ್ನು ಮೇಲಕ್ಕೆತ್ತಿದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬೈಂದೂರು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

