Breaking News

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೂವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ದೆಹಲಿ ನ್ಯಾಯಾಲಯ ಸೋಮವಾರ ಆದೇಶ ನೀಡಿದೆ. ಸಿಬಿಐ ಅರ್ಜಿಯ ಮೇರೆಗೆ ವಿಶೇಷ ನ್ಯಾಯಮೂರ್ತಿ ಅಜಯ್ ಗುಪ್ತಾ ಈ ಆದೇಶ ನೀಡಿದ್ದಾರೆ. ಆರೋಪಿಗಳಾದ ಮನೀಷ್ ಸಂಜಯ್ ಹವಾಲ್ದಾರ್, ಡಾ. ಮನೋಜ್ ಶಿರೂರೆ ಹಾಗೂ ತೇಜಸ್ ಹರ್ಷದ್‌ಕುಮಾರ್ ಶಾ ಅವರು ಪ್ರಶ್ನೆ ಪತ್ರಿಕೆಯನ್ನು ಅಕ್ರಮವಾಗಿ ಹಣಕ್ಕಾಗಿ ಹಂಚಿಕೆ ಮಾಡಿದ್ದರೆಂದು ಸಿಬಿಐ ಆರೋಪಿಸಿದೆ. ಪ್ರಕರಣದಲ್ಲಿ ಇದುವರೆಗೆ 13 ಮಂದಿಯನ್ನು ಬಂಧಿಸಲಾಗಿದೆ. ಮೇ 3ರಂದು ನಡೆದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಮರುಪರೀಕ್ಷೆಯನ್ನು ಜೂನ್ 21ರಂದು ನಡೆಸಲು ನಿಗದಿಪಡಿಸಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *