Breaking News

ಪತ್ನಿಯ ಮೇಲೆ ಅನುಮಾನ: ಮಚ್ಚಿನಿಂದ ಕೊಲೆ ಮಾಡಿದ ಪತಿ

ರಾಮನಗರ ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಪತ್ನಿಯ ಮೇಲಿನ ಅನುಮಾನದಿಂದ ವ್ಯಕ್ತಿಯೊಬ್ಬ ತನ್ನ ಪತ್ನಿ ನಾಗಮ್ಮ (42) ಅವರನ್ನು ಮಚ್ಚಿನಿಂದ ಹತ್ಯೆ ಮಾಡಿದ ಘಟನೆ ನಡೆದಿದೆ. ಆರೋಪಿ ಕಣಿ ಮಾದಯ್ಯ (50) ಬಳಿಕ ಸ್ವತಃ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಮಾದಯ್ಯ ಪತ್ನಿಯ ಚರಿತ್ರೆ ಬಗ್ಗೆ ಅನುಮಾನ ಪಡುತ್ತಿದ್ದ ಹಿನ್ನೆಲೆಯಲ್ಲಿ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರವಾಗಿ ನಾಗಮ್ಮ ಈ ಹಿಂದೆ ಮಹಿಳಾ ಠಾಣೆಯಲ್ಲೂ ದೂರು ನೀಡಿದ್ದರು ಎಂದು ತಿಳಿದುಬಂದಿದೆ. ಭಾನುವಾರ ಬೆಳಗ್ಗೆ ನಡೆದ ಹತ್ಯೆಯ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಮಾದಯ್ಯನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *