ಚಿಕ್ಕಬಳ್ಳಾಪುರದಲ್ಲಿ ಖಾಸಗಿ ವಿಡಿಯೋಗಳ ವಿಚಾರವಾಗಿ ಬ್ಲ್ಯಾಕ್‌ಮೇಲ್‌ಗೆ ಒಳಗಾಗಿದ್ದ ಮಹಿಳೆಯೊಬ್ಬಳು ಸಹೋದರ ಸಂಬಂಧಿಯ ಜೊತೆ ಸೇರಿ ತನ್ನ ಅತ್ತಿಗೆ ಪುಷ್ಪಲತಾಳನ್ನು ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಭವ್ಯಾ ಹಾಗೂ ಲೋಹಿತ್ ಅಲಿಯಾಸ್ ಲುಲ್ಲು ವಿರುದ್ಧ ಪ್ರಕರಣ ದಾಖಲಾಗಿದೆ. ಲೋಹಿತ್, ಭವ್ಯಾಳ ಖಾಸಗಿ ವಿಡಿಯೋ ಮತ್ತು ಫೋಟೋಗಳನ್ನು ಬಳಸಿಕೊಂಡು ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ಈಗಾಗಲೇ ಲಕ್ಷಾಂತರ ರೂಪಾಯಿ ನೀಡಿದ್ದರೂ ಕಿರುಕುಳ ಮುಂದುವರಿದ ಹಿನ್ನೆಲೆಯಲ್ಲಿ, ಅತ್ತಿಗೆಯ ಚಿನ್ನಾಭರಣ ಕಳವು ಮಾಡಲು ಇಬ್ಬರೂ ಸಂಚು ರೂಪಿಸಿದ್ದರು. ಕಳ್ಳತನದ ವೇಳೆ ಸಿಕ್ಕಿಬಿದ್ದ ಕಾರಣ ಗಾಬರಿಗೊಂಡ ಆರೋಪಿಗಳು ಪುಷ್ಪಲತಾಳನ್ನು ಹತ್ಯೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

