Breaking News

ಕಪ್ ಖುಷಿ ಕೈಮೀರಿತು: ಕರ್ನೂಲ್‌ನಲ್ಲಿ ಸಂಭ್ರಮಾಚರಣೆ ನಡುವೆ ಕಲ್ಲು ತೂರಾಟ

ಐಪಿಎಲ್ 2026ರ ಫೈನಲ್‌ನಲ್ಲಿ ಆರ್‌ಸಿಬಿ ಚಾಂಪಿಯನ್ ಆಗುತ್ತಿದ್ದಂತೆಯೇ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಅಭಿಮಾನಿಗಳು ಭರ್ಜರಿ ಸಂಭ್ರಮಾಚರಣೆ ನಡೆಸಿದರು. ಮಧ್ಯರಾತ್ರಿ ರಸ್ತೆಗಿಳಿದ ನೂರಾರು ಅಭಿಮಾನಿಗಳು ಘೋಷಣೆ ಕೂಗಿ ಮೆರವಣಿಗೆ ನಡೆಸಿದ ಪರಿಣಾಮ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸಂಭ್ರಮಾಚರಣೆ ವೇಳೆ ಪರಿಸ್ಥಿತಿ ಹದಗೆಟ್ಟು, ಕೆಲವು ದುಷ್ಕರ್ಮಿಗಳು ರಸ್ತೆಬದಿಯಲ್ಲಿ ನಿಂತಿದ್ದ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಈ ದಾಳಿಯಿಂದ ಬಸ್‌ನ ಹಲವು ಕಿಟಕಿಗಳ ಗಾಜುಗಳು ಪುಡಿಯಾಗಿದ್ದು, ಪ್ರಯಾಣಿಕರು ಆತಂಕಕ್ಕೊಳಗಾದರು. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದರೂ ಬಳಿಕ ಕಾನೂನು ಸುವ್ಯವಸ್ಥೆ ಪುನಃಸ್ಥಾಪನೆಯಾಗಿದ್ದು, ಘಟನೆ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *