Breaking News

ಮಂಗಳೂರು: ಆಗಾಗ ಮನೆ ಬಿಟ್ಟು ಹೋಗ್ತಿದ್ದ ವ್ಯಕ್ತಿಯನ್ನು ಕಳ್ಳ ಅಂತಾ ಆರೋಪಿಸಿ ಥಳಿಸಿ ಹತ್ಯೆ‌!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನ ಕೆರೆಯಲ್ಲಿ ಕಳ್ಳತನದ ಶಂಕೆ ಮೇರೆಗೆ ವ್ಯಕ್ತಿಯೊಬ್ಬನನ್ನು ಹಗ್ಗದಿಂದ ಕಟ್ಟಿ ಥಳಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ನಿವಾಸಿ ಯತೀಶ್ ಗೌಡ (32) ಮೃತ ಯುವಕನಾಗಿದ್ದು, ಕಳೆದ ಎರಡು ತಿಂಗಳಿಂದ ಮನೆ ಬಿಟ್ಟು ಹೋಗಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸ್ಥಳೀಯ ಕೆಲವರು ಯತೀಶ್ ಅವರನ್ನು ಕಳ್ಳನೆಂದು ಶಂಕಿಸಿ ಹಗ್ಗದಿಂದ ಕಟ್ಟಿ ಭೀಕರವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ತೀವ್ರ ಗಾಯಗಳಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಂದು ಮುಂಜಾನೆ ಮೃತದೇಹ ಪತ್ತೆಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದ ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ರಾಹಿಂ, ಯಶೋಧರ ಗೌಡ ಮತ್ತು ಮೋಹನ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *