Breaking News

ಮನೆಯೇ ಗನ್‌ ಕಾರ್ಖಾನೆ, ಪುಸ್ತಕದಂಗಡಿ ಹೆಸರಲ್ಲಿ ಪಿಸ್ತೂಲ್‌ ದಂಧೆ! : ಬೆಳಗಾವಿಯಲ್ಲೊಂದು ಭಯಾನಕ ದಂಧೆ ಬಯಲು!

ಬೆಳಗಾವಿ ಪೊಲೀಸರು ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಕ್ರಮ ನಾಡಬಂದೂಕು ತಯಾರಿಕೆ ಮತ್ತು ಮಾರಾಟ ಜಾಲವನ್ನು ಪತ್ತೆಹಚ್ಚಿದ್ದು, ಪ್ರಮುಖ ಆರೋಪಿಯ ಸೇರಿ 13 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 9 ನಾಡಬಂದೂಕುಗಳು ಹಾಗೂ ಭಾರಿ ಪ್ರಮಾಣದ ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಖಾನಾಪುರ ತಾಲೂಕಿನ ಕಟಗಲಿ ಗ್ರಾಮದ ಮಾರುತಿ ಸುತಾರ್ ತನ್ನ ಮನೆಯಲ್ಲಿ ರಹಸ್ಯವಾಗಿ ಬಂದೂಕು ತಯಾರಿಸುತ್ತಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ. 2024ರ ಕೊಲೆ ಪ್ರಕರಣದ ತನಿಖೆ ವೇಳೆ ಈ ಜಾಲದ ಸುಳಿವು ಸಿಕ್ಕಿದ್ದು, ಬಳಿಕ ವ್ಯಾಪಕ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದಲ್ಲಿ ಬುಕ್ ಸ್ಟಾಲ್ ಹೆಸರಿನಲ್ಲಿ ಗನ್ ಬಿಡಿಭಾಗಗಳು ಮತ್ತು ಸ್ಫೋಟಕಗಳನ್ನು ಮಾರಾಟ ಮಾಡಲಾಗುತ್ತಿತ್ತು. ಪ್ರಕರಣ ಸಂಬಂಧ ಖಾನಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಶಸ್ತ್ರಾಸ್ತ್ರಗಳ ಪೂರೈಕೆ ಜಾಲದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *