Breaking News

ಜಾಲತಾಣದಲ್ಲಿ ಅಪ್ರಾಪ್ತರ ಅಶ್ಲೀಲ ವಿಡಿಯೋ ಪೋಸ್ಟ್: ಯುವಕನ ವಿರುದ್ಧ ಕೇಸ್

ಬೆಳಗಾವಿ: ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಾಪ್ತರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿದ ಯುವಕನ ವಿರುದ್ಧ ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀನಾಥ್ ಪಾಟೀಲ ಅಶ್ಲೀಲ ವಿಡಿಯೋ ಹಂಚಿಕೊಂಡ ಆರೋಪಿ. ಈತ ಇನ್ಸ್ಟಾಗ್ರಾಮ್ ಮತ್ತು ಮೆಸೇಂಜರ್ ಮೂಲಕ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡಿದ್ದ. 2024ರ ಡಿಸೆಂಬರ್ 15ರಂದು ಪೋಸ್ಟ್ ಮಾಡಿದ್ದ ಒಂದು ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿದ್ದ ಕೇಂದ್ರ ಸರ್ಕಾರದ ಇಂಡಿಯನ್ ಸೈಬರ್ ಕ್ರೈಂ ಕೋ ಆರ್ಡಿನೇಷನ್ ಸೆಂಟರ್ ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಳಗಾವಿ ಸೈಬರ್ ಕ್ರೈಂ ವಿಭಾಗಕ್ಕೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಸಿಇಎನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *