ಬೆಂಗಳೂರು ಮೂಲದ ದೀಪಕ್ ಕೇಬಲ್ಸ್ (ಇಂಡಿಯಾ) ಲಿಮಿಟೆಡ್ ವಿರುದ್ಧ ₹899.35 ಕೋಟಿ ಸಾಲ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿದೆ. ಈ ವೇಳೆ ₹1.27 ಕೋಟಿ ನಗದು, ಚಿನ್ನಾಭರಣ ಹಾಗೂ ₹18 ಕೋಟಿ ಠೇವಣಿಯ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಲಾಗಿದೆ. ಎಸ್‌ಬಿಐ ಮತ್ತು ಅದರ ಸಹವರ್ತಿ ಬ್ಯಾಂಕ್‌ಗಳಿಂದ ಪಡೆದ ಸಾಲದ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿರುವ ಆರೋಪದಡಿ ಸಿಬಿಐ ಪ್ರಕರಣ ದಾಖಲಿಸಿತ್ತು. ತನಿಖೆಯ ಭಾಗವಾಗಿ ಕಂಪನಿ ಮತ್ತು ನಿರ್ದೇಶಕರ ನಿವಾಸಗಳಲ್ಲಿ ಶೋಧ ನಡೆಸಿದ ಇ.ಡಿ, ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

