Breaking News

ಮಾರಕಾಸ್ತ್ರ ತೋರಿಸಿ ಬೆದರಿಕೆ – ಹಾಡಹಗಲೇ ಚಿನ್ನದಂಗಡಿ ದರೋಡೆ!

ನೆಲಮಂಗಲ ತಾಲೂಕಿನ ಟಿ.ಬೇಗೂರಿನ ಮಹಾಲಕ್ಷ್ಮೀ ಜ್ಯುವೆಲರ್ಸ್‌ಗೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನದ ಉಂಗುರಗಳನ್ನು ದೋಚಿ ಪರಾರಿಯಾಗಿದ್ದಾರೆ. ಅಂಗಡಿಯಲ್ಲಿದ್ದವರನ್ನು ಡ್ಯಾಗರ್ ತೋರಿಸಿ ಬೆದರಿಸಿದ ಆರೋಪಿಗಳು ಉಂಗುರಗಳಿದ್ದ ಟ್ರೇ ಕಸಿದುಕೊಂಡು ಪರಾರಿಯಾಗಿದ್ದು, ಈ ವೇಳೆ ಕೆಲವು ಉಂಗುರಗಳು ರಸ್ತೆಗೆ ಬಿದ್ದಿವೆ ಎನ್ನಲಾಗಿದೆ. ಒಟ್ಟು 5 ಚಿನ್ನದ ಉಂಗುರಗಳು ಕಳುವಾಗಿದ್ದು, ಅವುಗಳ ತೂಕ ಸುಮಾರು 35 ಗ್ರಾಂ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಗ್ರಾಮಾಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ. ಸ್ಥಳೀಯರು ಹೆಚ್ಚುತ್ತಿರುವ ದರೋಡೆ ಪ್ರಕರಣಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *