Breaking News

ನಗರದಲ್ಲಿ ಮಿತಿ ಮೀರಿದ ಗೂಂಡಾಗಿರಿ – ಸಿಗರೇಟ್ ಹಣ ಕೇಳಿದ್ದಕ್ಕೆ ಅಂಗಡಿಯವನ ಮೇಲೆ ಹಲ್ಲೆ

ಬೆಂಗಳೂರಿನ ದೀಪಾಂಜಲಿ ನಗರದಲ್ಲಿರುವ ಮಂಜುನಾಥ್ ಕಾಂಡಿಮೆಂಟ್ಸ್‌ನಲ್ಲಿ ಟೀ ಮತ್ತು ಸಿಗರೇಟ್ ಪಡೆದು ಹಣ ಕೇಳಿದ್ದಕ್ಕೆ ಪುಡಿ ರೌಡಿಗಳ ಗುಂಪೊಂದು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿ ಅಂಗಡಿ ಧ್ವಂಸಗೊಳಿಸಿರುವ ಘಟನೆ ನಡೆದಿದೆ. ರಮೇಶ್ ಹಾಗೂ ಆತನ ಸಹಚರರು ಮಾಲೀಕ ಪ್ರದೀಪ್ ಅವರೊಂದಿಗೆ ಗಲಾಟೆ ನಡೆಸಿ ಹಲ್ಲೆ ಮಾಡಿದ್ದು, ಅಂಗಡಿಯಲ್ಲಿದ್ದ ಗಾಜಿನ ಬಾಟಲಿಗಳನ್ನು ಒಡೆದು ದಾಂಧಲೆ ನಡೆಸಿದ್ದಾರೆ. ಅಲ್ಲದೆ, ಪೊಲೀಸರಿಗೆ ದೂರು ನೀಡಿದರೆ ಕೊಲೆ ಬೆದರಿಕೆ ಹಾಕಿರುವ ಆರೋಪವೂ ಕೇಳಿಬಂದಿದೆ. ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *