ಬೆಂಗಳೂರು: ಮನೆಯಲ್ಲೇ ₹25 ಲಕ್ಷ ಕಳ್ಳತನ ಮಾಡಿದ್ದ ಆರೋಪದ ಮೇಲೆ ಮನೆಗೆಲಸದಾಕೆ ರತ್ನಮ್ಮರನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಅವರಿಂದ ₹15 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಜ್ಞಾನಭಾರತಿ ಲೇಔಟ್ ನಿವಾಸಿ ಬದರಿ ರಂಗನ್ ಅವರ ಮನೆಯಲ್ಲಿ ಕಳೆದ 10 ವರ್ಷಗಳಿಂದ ಕೆಲಸ ಮಾಡುತ್ತಿದ್ದ ರತ್ನಮ್ಮ, ಬೀರುವಿನಲ್ಲಿ ಇಟ್ಟಿದ್ದ ಹಣವನ್ನು ಕಳವು ಮಾಡಿರುವುದು ಸಿಸಿಟಿವಿ ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ. ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಉಳಿದ ಹಣದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
Check Also
ದೇರಳಕಟ್ಟೆ: ಮೆಡಿಕಲ್ ಕಾಲೇಜಿನಲ್ಲಿ Ragging ಪ್ರಕರಣ ದಾಖಲು
ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …
bigtvnews | Hubli Dharwad News | Kannada News | Karnataka News Hubli News | News In Hubli | Local news

