Breaking News

ಮಾರಕಾಸ್ತ್ರದಿಂದ ಹಲ್ಲೆ: ಯುವಕನಿಗೆ ಗಂಭೀರ ಗಾಯ

ರಾಯಚೂರು: ಐಪಿಎಲ್ ಕ್ರಿಕೆಟ್ ಪಂದ್ಯ ಜಯದ ಸಂಭ್ರಮಾಚರಣೆ ವೇಳೆ ನಡೆದ ವಾಗ್ವಾದವು ಯುವಕರ ನಡುವಿನ ಘರ್ಷಣೆಗೆ ತಿರುಗಿ, ಒಬ್ಬ ಯುವಕನಿಗೆ ಗಂಭೀರ ಗಾಯವಾದ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ನಗರದ ಲಕ್ಷ್ಮಮ್ಮದೇವಿ ದೇವಸ್ಥಾನ ಬಳಿ, ಜಯದ ಸಂಭ್ರಮದಲ್ಲಿ ಬೈಕ್‌ಗಳಲ್ಲಿ ಆಗಮಿಸಿದ ಯುವಕರು ಅತಿಯಾದ ಶಬ್ದ ಮಾಡುತ್ತಿದ್ದುದನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿ, ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ ಎಂದು ತಿಳಿದುಬಂದಿದೆ. ಘರ್ಷಣೆಯ ವೇಳೆ ಒಬ್ಬ ಯುವಕನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲಾಗಿದೆ. ಆತ ಗಂಭೀರವಾಗಿ ಗಾಯಗೊಂಡಿದ್ದು, ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಯುವಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಹಲ್ಲೆಗೆ ಪ್ರತಿಯಾಗಿ ಇತರ ಯುವಕರೂ ಪ್ರತಿಹಲ್ಲೆ ನಡೆಸಿದ ಕಾರಣ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ ದರು.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *