ಬಾಗಲಕೋಟೆ: ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ಠಾಣಾ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 13.34 ಲಕ್ಷ ರೂಪಾಯಿ ಮೌಲ್ಯದ ಕಳುವಾದ ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಮಾಹಿತಿಯ ಪ್ರಕಾರ, 2025-26ನೇ ಸಾಲಿನಲ್ಲಿ ವಿವಿಧ ಮನೆಗಳಲ್ಲಿ ನಡೆದ ಕಳ್ಳತನ ಪ್ರಕರಣಗಳಲ್ಲಿ ಕಳುವಾಗಿದ್ದ ಒಟ್ಟು 62 ಗ್ರಾಂ ಬಂಗಾರದ ಆಭರಣಗಳನ್ನು ಪತ್ತೆಹಚ್ಚಲಾಗಿದೆ. ಇದರ ಅಂದಾಜು ಮೌಲ್ಯ ಸುಮಾರು 9.15 ಲಕ್ಷ ರೂಪಾಯಿಗಳಷ್ಟಾಗಿದೆ. ಇದರ ಜೊತೆಗೆ 2026ನೇ ಸಾಲಿನಲ್ಲಿ ಕಳೆದುಹೋದ 30 ದುಬಾರಿ ಮೊಬೈಲ್ ಫೋನ್‌ಗಳನ್ನು ಕೇಂದ್ರ ಸರ್ಕಾರದ ಸೈಬರ್ ಕ್ರೈಮ್ ತಡೆ ಉಪಕ್ರಮ CEIR ಪೋರ್ಟಲ್ ಮೂಲಕ ಟ್ರ್ಯಾಕ್ ಮಾಡಿ ಯಶಸ್ವಿಯಾಗಿ ರಿಕವರಿ ಮಾಡಲಾಗಿದೆ. ಈ ಮೊಬೈಲ್‌ಗಳ ಮೌಲ್ಯ ಸುಮಾರು 4.19 ಲಕ್ಷ ರೂಪಾಯಿಗಳಾಗಿವೆ. ಒಟ್ಟು 13.34 ಲಕ್ಷ ರೂ. ಮೌಲ್ಯದ ಕಳುವಾದ ಸ್ವತ್ತುಗಳನ್ನು ಪತ್ತೆಹಚ್ಚಿ ಮೂಲ ಮಾಲೀಕರಿಗೆ ಹಿಂತಿರುಗಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದು, ತಂಡಕ್ಕೆ ಬಹುಮಾನ ಘೋಷಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

