Breaking News

ರಾಜ್ಯದಲ್ಲಿ ಆಘಾತಕಾರಿ ಘಟನೆ ; ಡ್ರಾಪ್ ಕೊಡುವ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನ, ಬೈಕ್ ನಿಂದ ಜಿಗಿದ ಬಾಲಕಿ

ಆರೋಪಿಯೊಬ್ಬ ಬಾಲಕಿಗೆ ಬೈಕ್‌ನಲ್ಲಿ ಡ್ರಾಪ್ ಕೊಡುವುದಾಗಿ ನಂಬಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಜನಸಂಚಾರವಿಲ್ಲದ ಪ್ರದೇಶಕ್ಕೆ ಕರೆದೊಯ್ದು ಆರೋಪಿಯು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆರೋಪಿ ಬಾಲಕಿಯನ್ನು ವಾಪಸ್ ಕರೆತರುವಾಗ, ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಭಯಭೀತರಾದ ಬಾಲಕಿ, ಜೀವ ರಕ್ಷಣೆಗಾಗಿ ಚಲಿಸುತ್ತಿದ್ದ ಬೈಕ್‌ನಿಂದ ಕೆಳಗೆ ಜಿಗಿದಿದ್ದಾಳೆ. ಬೈಕ್‌ನಿಂದ ಜಿಗಿದ ಪರಿಣಾಮ ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಹಾಸನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಮುಖ್ಯ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಆತನ ಕೃತ್ಯಕ್ಕೆ ಸಹಕರಿಸಿದ ಮತ್ತಿಬ್ಬರು ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *