ಆಂಧ್ರ ಪ್ರದೇಶದ ಪಾರ್ವತೀಪುರಂ ಮನ್ಯಂ ಜಿಲ್ಲೆಯ ವೆಲಗವಲಸ ಗ್ರಾಮದಲ್ಲಿ ಮಂತ್ರವಾದ ಮಾಡುತ್ತಿದ್ದಾನೆ ಎಂಬ ಸಂಶಯದ ಮೇಲೆ 30 ವರ್ಷದ ರಮೇಶ್ ಎಂಬ ಯುವಕನನ್ನು ಗ್ರಾಮಸ್ಥರು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಮನೆ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ರಮೇಶ್‌ನನ್ನು ಹೊರಗೆ ಕರೆಸಿ ಥಳಿಸಿ, ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ರಮೇಶ್ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಪತ್ನಿಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು 16 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಮೂಢನಂಬಿಕೆ ವಿರುದ್ಧ ಜಾಗೃತಿ ಮೂಡಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ನೆಟಿಜನ್‌ಗಳು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

