Breaking News

ಕೋಲಾರ : ನೇಣು ಬಿಗಿದುಕೊಂಡು ಯುವಕ-ಮಹಿಳೆ ಆತಹತ್ಯೆ

ಮರಕ್ಕೆ ನೇಣು ಬಿಗಿದುಕೊಂಡು ಯುವಕ ಹಾಗೂ ಮಹಿಳೆ ಆತಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಬೆಣಜೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊನ್ನೇನಹಳ್ಳಿ ಗ್ರಾಮದ ಸುಮಿತ್ರ ಹಾಗೂ ಆನಂದ್‌ ಆತಹತ್ಯೆಗೆ ಶರಣಾದವರು. ಆನಂದ್‌ ಹಾಗೂ ಸುಮಿತ್ರ ನಡುವೆ ಅಕ್ರಮ ಸಂಬಂಧವಿತ್ತು ಎಂಬ ಆರೋಪಗಳು ಕೇಳಿಬಂದಿದ್ದು, ಈ ವಿಚಾರ ಮಹಿಳೆ ಮನೆಯಲ್ಲಿ ಪ್ರಸ್ತಾಪವಾದ ಹಿನ್ನೆಲೆಯಲ್ಲಿ ಕಳೆದ ಐದು ದಿನಗಳಿಂದ ಮಹಿಳೆ ನಾಪತ್ತೆಯಾಗಿದ್ದರು. ಆದರೆ ಇಂದು ಬೆಳಿಗ್ಗೆ ಬೆಟ್ಟಬೆಣಜೇನಹಳ್ಳಿ ಗ್ರಾಮದ ಹೊರವಲಯದ ಹುಣಸೆಮರದಲ್ಲಿ ಇಬ್ಬರೂ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸ್ಥಳೀಯರು ಗಮನಿಸಿ ಕೂಡಲೇ ಕೋಲಾರ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *