Breaking News

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುರುವಾರ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 7 ತಿಂಗಳ ಹಸುಗೂಸು, ವೃದ್ಧ ದಂಪತಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಮರಾಜನಗರ ತಾಲೂಕಿನ ದೊಡ್ಡಮೂಡಹಳ್ಳಿ ಕ್ರಾಸ್ ಬಳಿ ಎರಡು ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ಮುಬಾರಕ್ (70) ಹಾಗೂ 7 ತಿಂಗಳ ಹಸುಗೂಸು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಾಮರಾಜನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ, ಚಿಕ್ಕಬಳ್ಳಾಪುರ ಜಿಲ್ಲೆಯ ಸಾದಲಿ ಕ್ರಾಸ್ ಬಳಿ ಟಿವಿಎಸ್ ಎಕ್ಸೇಲ್‌ಗೆ ಎಪಿಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಲಕ್ಷ್ಮಣ (75) ಮತ್ತು ಅವರ ಪತ್ನಿ ರತ್ನಮ್ಮ (70) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎರಡೂ ಘಟನೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *