ಬೆಂಗಳೂರು: ಕರ್ತವ್ಯನಿರತ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ್ದ ಇಬ್ಬರ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯ ಕಾನ್‌ಸ್ಟೆàಬಲ್ ಲಕ್ಷ್ಮಣ್ ನಾಯಕ್ ಮೇಲೆ ಹಲ್ಲೆ ನಡೆಸಿದ ಮುಬಾರಕ್ ಹಾಗೂ ಶಾಹೀದ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ. ಜೂನ್ 1ರಂದು ಸಂಜೆ ನಮ್ಮೂರ ತಿಂಡಿ ಜಂಕ್ಷನ್ ಬಳಿ ಕಾನ್‌ಸ್ಟೇಬಲ್ ಲಕ್ಷ್ಮಣ್ ನಾಯಕ್ ಕರ್ತವ್ಯಕ್ಕೆ ನಿಯೋಜನೆ ಗೊಂಡಿದ್ದರು. ಆಗ ಒಂದೇ ದ್ವಿಚಕ್ರ ವಾಹನದಲ್ಲಿ ಮೂವರು ಬರುತ್ತಿದ್ದರು. ಅದನ್ನು ಗಮನಿಸಿದ ಲಕ್ಷ್ಮಣ್ ನಾಯಕ್, ವಾಹನ ತಡೆದು, ಪ್ರಶ್ನಿಸಿದ್ದಾರೆ. ಅಲ್ಲದೆ, ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ. ಆಗ, ಆರೋಪಿಗಳಾದ ಮುಬಾರಕ್ ಹಾಗೂ ಶಾಹೀದ್ ಕಾನ್‌ಸ್ಟೇಬಲ್ ಲಕ್ಷ್ಮಣ್ ನಾಯಕ್‌ರನ್ನು ತಳ್ಳಿ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಅಲ್ಲದೆ ಸಮವಸ್ತ್ರದ ಬಟನ್ ಕಿತ್ತು ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖೀಸಲಾಗಿದೆ. ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

