Breaking News

ತುಮಕೂರಿನಲ್ಲಿ ಇನ್ನೋವಾ-ಓಮ್ನಿ ಮುಖಾಮುಖಿ ಡಿಕ್ಕಿ: ಟೆಕ್ಕಿ ರವಿ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ!

ತುಮಕೂರು ಜಿಲ್ಲೆಯ ಕೆಂಕೆರೆ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಆದೋನಿ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ರವಿ ಅವರ ತಂದೆ, ತಾಯಿ ಹಾಗೂ ಪತ್ನಿ ದುರ್ಮರಣಕ್ಕೀಡಾಗಿದ್ದಾರೆ. ಹಿರಿಯೂರು ಮಾರ್ಗವಾಗಿ ಹುಳಿಯಾರು ಕಡೆಗೆ ಬರುತ್ತಿದ್ದ ಇನೋವಾ ಕಾರಿಗೆ ಎದುರಿನಿಂದ ಬಂದ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹುಳಿಯಾರು ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *