Breaking News

ಅಕ್ರಮ ಸಂಬಂಧ ಶಂಕೆ : ವ್ಯಕ್ತಿಗೆ ಚಾಕು ಇರಿದು ಕೊಲೆ

ಬೆಂಗಳೂರು ನಗರದ ಜೆ.ಜೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣದಲ್ಲಿ 45 ವರ್ಷದ ಅಕ್ರಂಪಾಷ ಹತ್ಯೆಯಾಗಿದ್ದಾರೆ. ಜೂನ್ 3ರ ತಡರಾತ್ರಿ ಕಾರ್ಯಕ್ರಮ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಟಿಪ್ಪು ಚೌಕ್ ಸಮುದಾಯ ಭವನದ ಬಳಿ ಆರೋಪಿಗಳು ಅವರ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಅಕ್ರಂಪಾಷ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮಹಿಳೆಯೊಬ್ಬರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಶಂಕೆಯೇ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಜೆ.ಜೆ.ನಗರ ಪೊಲೀಸರು ಪ್ರಮುಖ ಆರೋಪಿ ಖಾಲಿದ್ ಹಾಗೂ ಆತನ ಸಹಚರರ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *