Breaking News

ಚಾಮರಾಜನಗರದಲ್ಲಿ ಉಡ ಮಾರಾಟ, ಸಾಗಾಣಿಕೆಗೆ ಯತ್ನಿಸಿದ ಇಬ್ಬರ ಬಂಧನ

ಕೊಳ್ಳೇಗಾಲದ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಸಮೀಪದ ಕಾವೇರಿ ನದಿ ದಡದಲ್ಲಿ ಜೀವಂತ ಉಡವನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರು ಮೈಸೂರು ಜಿಲ್ಲೆಯ ಹುಣಸೂರು ಮೂಲದ ಮುಕ್ತಾರ್ ಪಾಶ (45) ಮತ್ತು ರಫೀ (44) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಜೀವಂತ ಉಡ ಹಾಗೂ ಕಬ್ಬಿಣದ ಪಂಜರವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದು, ಕಾರ್ಯಾಚರಣೆಯಲ್ಲಿ ಕೊಳ್ಳೇಗಾಲ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

Share News

About BigTv News

Check Also

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!

ವಿದೇಶದಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ …

Leave a Reply

Your email address will not be published. Required fields are marked *