Breaking News

ತಲೆಕೆಟ್ಟ ಯುವಕನಿಂದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನ!

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಮುಂಜಾನೆ ಟೀ ಕುಡಿಯಲು ಹೊರಟಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಬಲವಂತವಾಗಿ ಎತ್ತಿಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಯುವತಿಯ ಕಿರುಚಾಟ ಕೇಳಿ ಸ್ಥಳೀಯರು ಧಾವಿಸಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ವೈಟ್‌ಫೀಲ್ಡ್ ಪೊಲೀಸರು ತನಿಖೆ ನಡೆಸಿ ಕೆಲವೇ ಗಂಟೆಗಳಲ್ಲಿ ಸೈಬುಲ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ರಸ್ತೆ ಬದಿಯಲ್ಲಿ ಕಸ ಮತ್ತು ಕಬ್ಬಿಣದ ವಸ್ತುಗಳನ್ನು ಆಯುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು ಆರೋಪಿಯ ಹಿನ್ನೆಲೆ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *