ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬೆಡಶೆಟ್ಟಹಳ್ಳಿಯಲ್ಲಿ ಶೆಡ್ನಲ್ಲಿ ಮಲಗಿದ್ದ 50ಕ್ಕೂ ಹೆಚ್ಚು ಕುರಿಗಳ ಮೇಲೆ ದುಷ್ಕರ್ಮಿಗಳು ಚಾಕು-ಚೂರಿಯಿಂದ ದಾಳಿ ನಡೆಸಿದ ಅಮಾನವೀಯ ಘಟನೆ ನಡೆದಿದೆ. ದಾಳಿಯಲ್ಲಿ ಐದು ಕುರಿಗಳು ಸಾವನ್ನಪ್ಪಿದ್ದು, ಹಲವು ಕುರಿಗಳು ಗಂಭೀರವಾಗಿ ಗಾಯಗೊಂಡಿವೆ. ದೊಡ್ಡತಿಮ್ಮರಾಯಪ್ಪ ಎಂಬ ರೈತನಿಗೆ ಸೇರಿದ ಕುರಿಗಳ ಮೇಲೆ ತಡರಾತ್ರಿ ಈ ಕೃತ್ಯ ಎಸಗಲಾಗಿದೆ. ಬೆಳಗ್ಗೆ ಕೊಟ್ಟಿಗೆಗೆ ಬಂದ ವೇಳೆ ರಕ್ತಸಿಕ್ತ ಸ್ಥಿತಿಯಲ್ಲಿ ಕುರಿಗಳು ಕಂಡುಬಂದಿದ್ದು, ರೈತ ಆಘಾತಕ್ಕೊಳಗಾಗಿದ್ದಾರೆ. ಘಟನಾ ಸ್ಥಳಕ್ಕೆ ಮಾಸ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೃತ್ಯ ಎಸಗಿದ ದುಷ್ಕರ್ಮಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

