Breaking News

ದಾವಣಗೆರೆಯಲ್ಲಿ ಇಬ್ಬರು ಶಂಕಿತ ಪಾಕ್‌ ಉಗ್ರರ ಸೆರೆ

ದಾವಣಗೆರೆಯಲ್ಲಿ ಅಡಗಿಕೊಂಡು ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದರೆಂಬ ಆರೋಪದ ಮೇಲೆ ಇಬ್ಬರು ಶಂಕಿತ ಭಯೋತ್ಪಾದಕರನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದಾವಣಗೆರೆಯ ಜಮೀರ್ ಖಾನ್ (22) ಹಾಗೂ ತುಮಕೂರಿನ ಅಲ್ಲಾಭಕ್ಷಿ ಎಂದು ಗುರುತಿಸಲಾಗಿದೆ. ಗುಪ್ತಚರ ಇಲಾಖೆಯ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಇಬ್ಬರೂ ವಿದೇಶದಲ್ಲಿದ್ದ ಉಗ್ರರೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕದಲ್ಲಿದ್ದರೆಂದು ಶಂಕಿಸಿದ್ದಾರೆ. ದೇಶದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಸಂಚು ರೂಪಿಸಿದ್ದ ಆರೋಪವೂ ಕೇಳಿಬಂದಿದೆ. ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *