Breaking News

ಪ್ರವಾಸಿಗರ ಜೊತೆ ಗಲಾಟೆ: ಸುಳ್ಳು ದೂರು ನೀಡಿ ಪೊಲೀಸರನ್ನೇ ದಾರಿ ತಪ್ಪಿಸಿದ ಹೋಟೆಲ್ ಮಾಲೀಕ?

ಮಡಿಕೇರಿ: ಅಬ್ಬಿ ಜಲಪಾತ ವೀಕ್ಷಣೆಗೆ ಬಂದಿದ್ದ ಬೆಂಗಳೂರು ಮೂಲದ ಪ್ರವಾಸಿಗರ ತಂಡ ಹಾಗೂ ಖಾಸಗಿ ಹೋಟೆಲ್ ಮಾಲೀಕರ ನಡುವೆ ಚಿಪ್ಸ್ ತೆಗೆದುಕೊಂಡ ವಿಚಾರಕ್ಕೆ ವಾಗ್ವಾದ ನಡೆದಿದೆ. ಗಲಾಟೆ ತೀವ್ರಗೊಂಡ ಬಳಿಕ ಹೋಟೆಲ್ ಮಾಲೀಕ ಆಗ್ನೇಶ್, ಪ್ರವಾಸಿಗರು ತನ್ನ ಹಾಗೂ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇನ್ನೊಂದೆಡೆ, ಹೋಟೆಲ್ ಮಾಲೀಕನೇ ಪ್ರವಾಸಿಗರನ್ನು ಬೆದರಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಪ್ರಕರಣದ ನಿಜಾಂಶ ತಿಳಿಯಲು ಸಿಸಿಟಿವಿ ದೃಶ್ಯಗಳು ಹಾಗೂ ಇತರೆ ಸಾಕ್ಷ್ಯಾಧಾರಗಳ ಪರಿಶೀಲನೆಗೆ ಒತ್ತಾಯ ವ್ಯಕ್ತವಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *