Breaking News

ಪದವಿ ಓದುತ್ತಿದ್ದ ಯುವತಿಯ ಎಳೆದೊಯ್ದು ಅತ್ಯಾಚಾರ ಯತ್ನ

ಬೆಂಗಳೂರು: ಟೀ ಕುಡಿದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ 23 ವರ್ಷದ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ವೈಟ್‌ಫೀಲ್ಡ್‌ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಸೈಫಲ್‌ ಮಂಡಲ್‌ (27) ಬಂಧಿತ. ಆರೋಪಿ ಕೆಲ ವರ್ಷಗಳಿಂದ ನಗರದಲ್ಲಿ ಚಿಂದಿ ಆಯುವ ಕೆಲಸ ಮಾಡುತ್ತಿದ್ದ. ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಕೋರ್ಟ್‌ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜೂನ್‌ 2 ರಂದು ವೈಟ್‌ಫೀಲ್ಡ್‌ ಮುಖ್ಯರಸ್ತೆಯಲ್ಲಿ ದುರ್ಘ‌ಟನೆ ನಡೆದಿದೆ. ನೆರೆ ರಾಜ್ಯದ ಯುವತಿ ನಗರದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು, ಜೂನ್‌ 2 ರಂದು ತಡರಾತ್ರಿ ಟೀ ಕುಡಿಯಲು ಪೇಯಿಂಗ್‌ ಗೆಸ್ಟ್‌ನಿಂದ ಹೊರಗೆ ಬಂದು, ಟೀ ಕುಡಿದುಕೊಂಡು ವಾಪಸ್‌ ಪಿಜಿಗೆ ನಡೆದುಕೊಂಡು ಹೋಗುತ್ತಿದ್ದರು. ಆಗ ಆಕೆಯನ್ನು ಹಿಂಬಾಲಿಸಿದ ಆರೋಪಿ, ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ವಿದ್ಯಾರ್ಥಿನಿ ಗಾಬರಿಯಿಂದ ಕಿರುಚಾಡಿದ್ದರು. ರಸ್ತೆಯಲ್ಲಿ ಸಾಗುತ್ತಿದ್ದ ವಾಹನ ಚಾಲಕರು ಹಾಗೂ ಅಕ್ಕ-ಪಕ್ಕದ ನಿವಾಸಿಗಳು ಸ್ಥಳಕ್ಕೆ ಬಂದಿದ್ದಾರೆ. ಅಷ್ಟರಲ್ಲಿ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಳಿಕ ವಿದ್ಯಾರ್ಥಿನಿ ವೈಟ್‌ ಫೀಲ್ಡ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಕೃತ್ಯ ನಡೆದ ಸ್ಥಳದ ಅಕ್ಕಪಕ್ಕದಲ್ಲಿ ಅಳವಡಿಸಿದ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ ಈ ಸಂಬಂಧ ವೈಟ್‌ಫೀಲ್ಡ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *