Breaking News

ಕಚೇರಿ ಒಳಗಡೆಯೇ ಮಾಜಿ ಪ್ರೇಯಸಿಯನ್ನು ಕೊಚ್ಚಿಕೊಂದ ಯುವಕ,

ಬೆಂಗಳೂರುದಲ್ಲಿ ಪ್ಯಾಕರ್ಸ್ ಮತ್ತು ಮೂವರ್ಸ್ ಕಂಪನಿಯೊಂದರಲ್ಲಿ ಯುವತಿಯ ಮೇಲೆ ಸಹೋದ್ಯೋಗಿಯೇ ಚಾಕುವಿನಿಂದ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ನಡೆದಿದೆ. ಆರೋಪಿಯನ್ನು ಹರ್ಜಿಂದರ್ ಸಿಂಗ್ ಮಾನ್ ಅಲಿಯಾಸ್ ಹ್ಯಾರಿ ಎಂದು ಗುರುತಿಸಲಾಗಿದ್ದು, ಆತ ಮತ್ತು ಮೃತ ಯುವತಿ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಪ್ರೀತಿಯಿದ್ದು, ಸುಮಾರು ಆರು ತಿಂಗಳ ಹಿಂದೆ ಬ್ರೇಕಪ್ ಆಗಿತ್ತು ಎನ್ನಲಾಗಿದೆ. ಗುರುವಾರ ಸಂಜೆ ಕಂಪನಿಗೆ ಬಂದ ಆರೋಪಿ, ಯುವತಿಯ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ. ತಪ್ಪಿಸಿಕೊಳ್ಳಲು ಯುವತಿ ಯತ್ನಿಸಿದರೂ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾಳೆ. ಘಟನೆ ಕಂಪನಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಹೋದ್ಯೋಗಿಗಳು ತಡೆಯಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ದಾಳಿಯ ಬಳಿಕ ಆರೋಪಿ ತನ್ನ ಮೇಲೆಯೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಚಾಕುವನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *