ಬಳ್ಳಾರಿ ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ಅಕ್ರಮ ಮಣ್ಣು ಸಾಗಾಟ ಪ್ರಕರಣದ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ಗ್ರಾಮಸ್ಥರ ಗುಂಪೊಂದು ಹಲ್ಲೆ ನಡೆಸಿದೆ. ಘಟನೆಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದು, ಗಂಭೀರವಾಗಿ ಗಾಯಗೊಂಡ ಪೊಲೀಸ್ ಪೇದೆ ವೀರೇಶ್ ಬಾಬು ಅವರನ್ನು ಬಿಎಂಸಿಆರ್‌ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ರಮ ಮಣ್ಣು ಸಾಗಾಟ ಹಾಗೂ ಜಾತಿನಿಂದನೆ ಪ್ರಕರಣದ ತನಿಖೆ ಹಿನ್ನೆಲೆ ಆರೋಪಿ ಅನೀಲ್‌ನನ್ನು ಬಂಧಿಸಲು ಪೊಲೀಸರು ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಕೆಲ ಗ್ರಾಮಸ್ಥರು ಆರೋಪಿಯನ್ನು ತಾವೇ ಠಾಣೆಗೆ ಕರೆತರುವುದಾಗಿ ಹೇಳಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಮಾತಿನ ಚಕಮಕಿ ವಾಗ್ವಾದಕ್ಕೆ ತಿರುಗಿ ಹಲ್ಲೆಗೆ ಕಾರಣವಾಗಿದ್ದು, ಘಟನೆಗೆ ಸಂಬಂಧಿಸಿದಂತೆ 10 ಜನರ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

