Breaking News

ಮಾಜಿ ಸಚಿವ ಜಮೀರ್ ಅಹಮದ್ ನಕಲಿ ಆಡಿಯೋ ವೈರಲ್ ಮಾಡಿದವರ ವಿರುದ್ಧ FIR ದಾಖಲು

ದಾವಣಗೆರೆಯಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ನಕಲಿ ಆಡಿಯೋ ವೈರಲ್ ಮಾಡಿದ ಆರೋಪದ ಹಿನ್ನೆಲೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಿರಾಜ್ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೂರಿನಲ್ಲಿ, ತಮ್ಮ ಹಾಗೂ ಜಮೀರ್ ಅಹಮದ್ ಖಾನ್ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ರಾಜಕೀಯ ಷಡ್ಯಂತ್ರದ ಭಾಗವಾಗಿ ನಕಲಿ ಆಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಪೊಲೀಸರು ಆಡಿಯೋದ ಮೂಲ ಹಾಗೂ ಅದನ್ನು ವೈರಲ್ ಮಾಡಿದವರ ಪತ್ತೆಗೆ ಮುಂದಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *