ಬೆಂಗಳೂರು: ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಕೆರೆಯಲ್ಲಿ ಶುಕ್ರವಾರ ಬೆಳಗ್ಗೆ ಪತ್ತೆಯಾಗಿದೆ. ಕೊಮ್ಮಘಟ್ಟದ ನಿವಾಸಿ ಚೈತ್ರಾ (29) ಮೃತ ಮಹಿಳೆ. ಪತಿ ಶರತ್ ಕುಮಾರ್ ಅವರನ್ನು ಬಂಧಿಸಲಾಗಿದೆ. ಚೈತ್ರಾ ಕಳೆದ 6 ವರ್ಷಗಳ ಹಿಂದೆ ಶರತ್ ಅವರನ್ನು ವಿವಾಹವಾಗಿದ್ದರು. ಶರತ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಕೊಮ್ಮಘಟ್ಟದ ಬಾಡಿಗೆ ಮನೆಯಲ್ಲಿ ದಂಪತಿ ನೆಲೆಸಿದ್ದರು. ವರದಕ್ಷಿಣೆ ತರುವಂತೆ ಶರತ್ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದೆ. ಪತಿಯ ನಡೆಯಿಂದ ಬೇಸತ್ತ ಚೈತ್ರಾ, ಕಳೆದ 4 ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು. ನಂತರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ ಎನ್ನಲಾಗುತ್ತಿದೆ. ಕೆರೆಯಲ್ಲಿ ಮೃತದೇಹ ಕಂಡ ಸ್ಥಳೀಯರು, ಪೊಲೀಸರಿಗೆ ಮಾಹಿತಿ ಈ ಬಗ್ಗೆ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ಹಾಗೂ ತುರ್ತು ಸೇವಾ ದಳದ ಸಿಬ್ಬಂದಿ ನೆರವು ಪಡೆದು ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ಚೈತ್ರಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

