ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಅಪ್ತರಾಗಿದ್ದ ಚಂದ್ರನಾಥ ರಥ್ ಹತ್ಯೆ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಬಿಐ ಶುಕ್ರವಾರ ತಿಳಿಸಿದೆ. ವಿಕಾಸ್ ಮಿಶ್ರಾ ಮತ್ತು ಗೋಲು ಸಿಂಗ್ ಬಂಧಿತರು. ಇವರನ್ನು ಕ್ರಮವಾಗಿ ಉತ್ತರ ಪ್ರದೇಶದ ಲಖನೌ ಮತ್ತು ಬಲಿಯಾದಲ್ಲಿ ಬಂಧಿಸಲಾಯಿತು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದು ಬೆಳವಣಿಗೆಯಲ್ಲಿ ಪ್ರಕರಣದ ಮತ್ತೊಬ್ಬ ಆರೋಪಿ ಜ್ಞಾನೇಂದ್ರ ಪ್ರತಾಪ್ ಸಿಂಗ್ ಅಲಿಯಾಸ್ ಮೋನು, ಬಲಿಯಾದಲ್ಲಿ ಕೋರ್ಟ್‌ಗೆ ಶರಣಾಗಿದ್ದಾನೆ. ಕೋರ್ಟ್ 12 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಎರಡು ದಿನದ ನಂತರ, ಮೇ 6ರಂದು ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಮಧ್ಯಮಗ್ರಾಮದಲ್ಲಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

