ಬೆಂಗಳೂರು ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಆರು ವರ್ಷದ ಮಗಳನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಮಗು ಮೃತಪಟ್ಟ ಮೂರು ತಿಂಗಳ ಬಳಿಕ ಪ್ರಕರಣ ದಾಖಲಾಗಿದ್ದು, ವೆನಿಲಾ ಎಂಬ ಬಾಲಕಿ ಸಾವಿನ ಕುರಿತು ತನಿಖೆ ನಡೆಯುತ್ತಿದೆ. ಮೃತ ಬಾಲಕಿಯ ತಂದೆ ಪ್ರವೀಣ್ ನೀಡಿದ ದೂರಿನ ಆಧಾರದಲ್ಲಿ ಪತ್ನಿ ಪ್ರಿಯಾಂಕಾ ಹಾಗೂ ಆಕೆಯ ಪ್ರಿಯಕರ ಮೋಹನ್ ವಿರುದ್ಧ ಪ್ರಕರಣ ದಾಖಲಾಗಿದೆ. ಅನೈತಿಕ ಸಂಬಂಧ ಹಾಗೂ ಮಗುವಿನ ಬಣ್ಣದ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಅನುಮಾನ ಮೂಡಿದ ಹಿನ್ನೆಲೆ ಪ್ರವೀಣ್ ಪೊಲೀಸರಿಗೆ ದೂರು ನೀಡಿದ್ದು, ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆಯ ಮೇಲೆ ಕಾಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

